ಮಂಗಳೂರು: ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರು ಮಂಗಳೂರಿನಲ್ಲಿ ಆರಂಭಿಸಿ ರುವ ನೂತನ ಕಚೇರಿಯನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಉದ್ಘಾಟಿಸಿದರು.

ಇಲ್ಲಿನ ಕದ್ರಿ ಶಿವಭಾಗ್ ನಲ್ಲಿರುವ ಮಹಾನಗರಪಾಲಿಕೆ ವಾಣಿಜ್ಯ ಸಂಕೀರ್ಣದ ಮೊದಲ ಮಹಡಿಯಲ್ಲಿ ಕಚೇರಿಯನ್ನು ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಶಾಸಕರಾದ ಐವನ್ ಡಿಸೋಜ, ಬಿ.ಎಂ. ಫಾರೂಖ್, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಪೊಲೀಸ್ ಅಯುಕ್ತ ಟಿ.ಆರ್. ಸುರೇಶ್, ಮೇಯರ್ ಭಾಸ್ಕರ್, ಮಾಜಿ ಶಾಸಕರಾದ ಮೊಹಿದೀನ್ ಬಾವಾ, ಜೆ.ಆರ್. ಲೋಬೋ, ಶಕುಂತಳಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
