ಮಂಗಳೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ಬೆಂಗಳೂರಿನ ಚಿಕ್ಕಸಂದ್ರ ಹೆಸರಾಗಟ್ಟದ ಸಪ್ತಗಿರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅ.15 ರಿಂದ ಅ.17ರವರೆಗೆ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಜೂಡೋ ಮಾರ್ಷಲ್ ಆಟ್ರ್ಸ್ ಸ್ಪರ್ಧೆ ನಡೆಯಿತು.

ಸ್ಪರ್ಧೆಯಲ್ಲಿ 49 ಕೆಜಿ ವಿಭಾಗದಲ್ಲಿ ಮಂಗಳೂರು ವಾಮಂಜೂರಿನ ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ವೆನಿಲ್ಲಾ ಮಣಿಕಂಠ ದ್ವಿತೀಯ ಸ್ಥಾನ ಪಡೆದುಕೊಂಡು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.
ಇವರು ರಾಜೇಶ್ ಬ್ರಹ್ಮರಕೂಟ್ಲು ಅವರ ಶಿಷ್ಯೆಯಾಗಿದ್ದು ಪೊಳಲಿ ರಾಮಕೃಷ್ಣ ತಪೋವನದಲ್ಲಿ ಉಚಿತವಾಗಿ ಮಿಕ್ಸೆಡ್ ಮಾರ್ಷಲ್ ಆಟ್ರ್ಸ್‍ನ ತರಬೇತಿಯನ್ನು ಪಡೆಯುತ್ತಿದ್ದಾರೆ.
