ಮೂಡುಬಿದಿರೆ : ಇಲ್ಲಿನ ಒಂಟಿಕಟ್ಟೆಯಲ್ಲಿರುವ ಅಗ್ನಿಶಾಮಕ ಠಾಣೆಯಲ್ಲಿ ಗುರುವಾರ ರಾಘವೇಂದ್ರ ಭಟ್ ಅವರ ನೇತೃತ್ವದಲ್ಲಿ ಆಯುಧ ಪೂಜೆ ನಡೆಯಿತು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ಪಿ ಜಗದೀಶ ಅಧಿಕಾರಿ, ಪುರಸಭಾ ಸದಸ್ಯರಾದ ಲಕ್ಷ್ಮಣ್ ಪೂಜಾರಿ, ನಾಗರಾಜ ಪೂಜಾರಿ, ಬಿಜೆಪಿ ಮುಖಂಡ ಕೆ.ಆರ್ ಪಂಡಿತ್, ಅಗ್ನಿಶಾಮಕ ಠಾಣಾಧಿಕಾರಿ ಕಿಶೋರ್ ಕುಮಾರ್ ಮತ್ತು ಸಿಬಂದಿಗಳು ಪಾಲ್ಗೊಂಡಿದ್ದರು.
