ಮೂಡುಬಿದಿರೆ: ದ.ಕ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪಿಯು ಕಾಲೇಜು ಸಂಯುಕ್ತ ಆಶ್ರಯದಲ್ಲಿ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಆಳ್ವಾಸ್ ಪಿಯು ಕಾಲೇಜು ತಂಡ ಸಮಗ್ರ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.
ಆಳ್ವಾಸ್ ತಂಡವು 38 ಚಿನ್ನ, 32 ಬೆಳ್ಳಿ ಸಹಿತ ಒಟ್ಟು 70 ಪದಕಗಳನ್ನು ಪಡೆದು 19 ವಯೋಮಾನ ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನಿಯಾಗಿ ಸಮಗ್ರ ಪ್ರಶಸ್ತಿಯನ್ನು ಗೆದ್ದುಕೊಂಡಿತು. ರನ್ನರ್ಸ್ ಅಪ್ ಪ್ರಶಸ್ತಿಯನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ಪಡೆದುಕೊಂಡಿತು. ಬಾಲಕರ ವಿಭಾಗದಲ್ಲಿ ಆಳ್ವಾಸ್ನ ಮಿಲನ್ ಹಾಗೂ ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ನ ಕ್ರೀಡಾಪಟು ಸಿಂಧು ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಅತಿಥೇಯ ಕಾಲೇಜಿನ ಪ್ರಾಂಶುಪಾಲರಾದ ವನಿತಾ ಜೋಶಿ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ವಿಜಯ ಕುಮಾರ್ ಶೆಟ್ಟಿ ಪ್ರಶಸ್ತಿ ವಿತರಿಸಿದರು. ನವೆಂಬರ್ 10, 11ರಂದು ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ ನಡೆಯಲಿದೆ.

