ಬಂಟ್ವಾಳ:ತಾಲ್ಲೂಕಿನ ಸರಪಾಡಿ ಮತ್ತು ಮಣಿನಾಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು 125 ಮಂದಿ ಅರ್ಹ ಫಲಾನುಭವಿಗಳಿಗೆ ಮಂಜೂರಾದ 94ಸಿ ಹಕ್ಕುಪತ್ರ ವಿತರಿಸಲು ರಾಜಕೀಯ ನೆಪದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಅಡ್ಡಿ ಪಡಿಸುತ್ತಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ಮತ್ತು ಪುತ್ತೂರು ಶಾಸಕದ್ವಯರು ಸಹಿತ ಫಲಾನುಭವಿಗಳು ಸೇರಿ ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ.30btl-Ulipady
ಘಟನೆ ಹಿನ್ನೆಲೆ:
ಸರಪಾಡಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಮಧ್ಯಾಹ್ನ 2.30 ಗಂಟೆಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇಲ್ಲಿನ ಸರಪಾಡಿ, ಮಣಿನಾಲ್ಕೂರು, ದೇವಸ್ಯಮೂಡೂರು ಗ್ರಾಮಗಳಿಂದ ಅಪಾರ ಮಂದಿ ಅರ್ಹ ಫಲಾನುಭವಿಗಳು ಸೇರಿದ್ದರು. ಆರಂಭದಲ್ಲಿ ಅರ್ಹ ಫಲಾನುಭವಿಗಳಿಗೆ ಸೌರವಿದ್ಯುತ್ ಸೌಲಭ್ಯ, ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಾಮಾಗ್ರಿಗಳನ್ನು ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್ ವಿತರಿಸಿದರು. ಇದೇ ವೇಳೆ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಮತ್ತು ಗ್ರಾಮಕರಣಿಕ ಅನಿಲ್ ಕುಮಾರ್ ಅವರು 125 ಹಕ್ಕುಪತ್ರಕ್ಕೆ ಬದಲಾಗಿ ಕೇವಲ 15 ಹಕ್ಕುಪತ್ರ ಒದಗಿಸುತ್ತಿದ್ದಂತೆಯೇ ಕಾರ್ಯಕ್ರಮವನ್ನು ಅರ್ಧದಲ್ಲೇ ಮೊಟಕುಗೊಳಿಸಿ ಎಲ್ಲರೂ ಬಿ.ಸಿ.ರೋಡು ಮಿನಿ ವಿಧಾನಸೌಧಕ್ಕೆ ಆಗಮಿಸಿ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.30btl-Falanubhavi
ಬಂಟ್ವಾಳ ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್, ಪುತ್ತೂರು ಶಾಸಕ ಸಂಜೀವ ಮಠಂದೂರು, ರಾಜ್ಯ ಸಹ ವಕ್ತಾರೆ ಸುಲೋಚನಾ ಜಿ.ಕೆ.ಭಟ್, ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ, ಬಿಜೆಪಿ ಕ್ಷೇತ್ರಾಧ್ಯಕ್ಷ ಬಿ.ದೇವದಾಸ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ್, ಪುರಸಭಾ ಸದಸ್ಯ ಎ.ಗೋವಿಂದ ಪ್ರಭು, ಮಾಜಿ ಅಧ್ಯಕ್ಷ ಬಿ.ದಿನೇಶ ಭಂಡಾರಿ, ದಿನೇಶ ಅಮ್ಟೂರು, ಗಂಗಾಧರ ಕೋಟ್ಯಾನ್  ,ದೇವಪ್ಪ ಪೂಜಾರಿ ಬಾಳಿಕೆ ಮತ್ತಿತರರು ತಹಶೀಲ್ದಾರ್ ಪುರಂದರ ಹೆಗ್ಡೆ ಅವರನ್ನು ತರಾಟೆಗೆ ತೆಗೆದುಕೊಂಡರು.
ಇದೇ ವೇಳೆ ಸಹಾಯಕ ಕಮಿಷನರ್ ಅವರಿಗೆ ಮೊಬೈಲ್ ಕರೆ ಮಾಡಿ ಶಾಸಕದ್ವಯರು ಮಾತನಾಡಿ, ಮುಂದಿನ ದಿನಗಳಲ್ಲಿ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿಯದಂತೆ ಎಚ್ಚರಿಸಿದರು.
ಜಿಲ್ಲಾ ಬಿಜೆಪಿ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ್ ಮಾತನಾಡಿ, ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಕೀಯ ಪ್ರೇರಿತವಾಗಿ ಮಾಜಿ ಸಚಿವ ಬಿ.ರಮಾನಾಥ ರೈ ವೇದಿಕೆ ಏರಿದರೆ ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಸೇರಿದಂತೆ ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ ಎಲ್ಲರೂ ವೇದಿಕೆ ಏರುವುದಾಗಿ ಎಚ್ಚರಿಕೆ ನೀಡಿದರು.
ಸರಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ, ಉಪಾಧ್ಯಕ್ಷ ದಯಾನಂದ ಶೆಟ್ಟಿ, ಮಾಜಿ ಅಧ್ಯಕ್ಷ ಧನಂಜಯ ಶೆಟ್ಟಿ, ಮಣಿನಾಲ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಶ್ರೀಧರ, ಉಪಾಧ್ಯಕ್ಷ ದಿನೇಶ ಯಾನೆ ಜಗದೀಶ, ನರಿಕೊಂಬು ಗ್ರಾಮ ಪಂಚಾಯಿತಿ ಅಧ್ಯಕ್ಷ ಯಶೋಧರ ಕರ್ಬೆಟ್ಟು, ಪ್ರಮುಖರಾದ ಮೋನಪ್ಪ ದೇವಸ್ಯ, ಸೀತಾರಾಮ ಪೂಜಾರಿ, ರಮಾನಾಥ ರಾಯಿ, ರತ್ನಕುಮಾರ್ ಚೌಟ, ನಾರಾಯಣ ಪೂಜಾರಿ ಬೊಳ್ಳುಕಲ್ಲು,  ಪ್ರಕಾಶ್ ಅಂಚನ್, ಪುರುಷೋತ್ತಮ ಪೂಜಾರಿ, ಸುದರ್ಶನ್ ಬಜ, ಪ್ರದೀಪ್ ಕುಮಾರ್, ಪುರುಷೋತ್ತಮ ಶೆಟ್ಟಿ, ಪ್ರಭಾಕರ ಪ್ರಭು, ಉಮೇಶ ಶೆಟ್ಟಿ ಬಡಗಬೆಳ್ಳೂರು, ಪ್ರಮೋದ್ ಕುಮಾರ್, ಮತ್ತಿತರರು ಇದ್ದರು.
ಸ್ಥಳದಲ್ಲೇ ಹಕ್ಕುಪತ್ರ ವಿತರಣೆ:
ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ತಹಶೀಲ್ದಾರ್ ಅವರು ಎಲ್ಲಾ ಹಕ್ಕುಪತ್ರಗಳನ್ನು ಶಾಸಕರ ಮೂಲಕ ಸ್ಥಳದಲ್ಲೇ ವಿತರಿಸುವ ಮೂಲಕ ಪ್ರತಿಭಟನಾಕಾರರು ಪ್ರತಿಭಟನೆ ಹಿಂತೆಗೆದುಕೊಂಡರು.

By suddi9

Leave a Reply

Your email address will not be published. Required fields are marked *