ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಟ್ವಾಳ ಮತ್ತು ತಾಲೂಕು ಬಾಲಭವನ ಸೊಸೈಟಿ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಮಕ್ಕಳಿಗೆ ಕನ್ನಡ ಗೀತೆ ಸ್ಪರ್ಧೆ ಸ್ತ್ರೀ ಶಕ್ತಿ ಭವನದಲ್ಲಿ ನಡೆಯಿತು.
ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಕನ್ನಡ ಭಾಷೆ ನಮಗೆ ತಾಯಿಯಿದ್ದಂತೆ, ಕನ್ನಡ ಮಾತನಾಡುವ ಮೂಲಕ ನಿತ್ಯೋತ್ಸವ ಮಾಡೋಣ ಎಂದು ಅವರು ಹೇಳಿದರು.
ಕಾರ್ಯಕ್ರಮ ದ ಅದ್ಯಕ್ಷ ತೆ ವಹಸಿ ಮಾತನಾಡಿದ ತಾ.ಪಂ.ಅದ್ಯಕ್ಷ ಚಂದ್ರಹಾಸ ಕರ್ಕೇರ, ಕನ್ನಡ ಭಾಷೆಯ ಬಗ್ಗೆ ತಾತ್ಸರ ಭಾವನೆ ಇರದೆ, ಕನ್ನಡ ನಾಡು ನುಡಿಯನ್ನು ಉಳಿಸಿ ಬೆಳೆಸುವ ಚಿಂತನೆ ವಿದ್ಯಾರ್ಥಿಗಳಲ್ಲಿ ಮೂಡಬೇಕು.
ಕನ್ನಡ ಬಗ್ಗೆ ಆಸಕ್ತಿ ಮೂಡಲು, ಕನ್ನಡದ ಇತಹಾಸವನ್ನು ತಿಳಿಸಲು ಇಲಾಖೆ ಇಂತಹ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ತಾ.ಪಂ.ಇಒ ರಾಜಣ್ಣ, ವಿಟ್ಲ ಸಿಡಿಪಿಒ ಸುಧಾಜೋಶಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಬಂಟ್ವಾಳ ಸಿಡಿಪಿಒ ಮಲ್ಲಿಕಾ ಸ್ವಾಗತಿಸಿ , ಮೇಲ್ವಿಚಾರಕಿ ಉಷಾ ಕುಮಾರಿ ವಂದಿಸಿದರು.
ಮೇಲ್ವಿಚಾರಕಿ ಗಾಯತ್ರಿ ಕಂಬಳಿ ಕಾರ್ಯಕ್ರಮ ನಿರೂಪಿಸಿದರು.

