ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಕರಿಯಂಗಳ ಗ್ರಾಮ ಪಂಚಾಯತ್ ಸದಸ್ಯರಾದ ಇಬ್ರಾಹಿಂ ನವಾಝ್ ಆಯ್ಕೆಯಾದರು.

ಮಾಜಿ ಸಚಿವರಾದ ಬಿ.ರಮಾನಾಥ ರೈ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರ ಪ್ರಕಾಶ್ ಶೆಟ್ಟಿ ಹಾಗೂ ಬಂಟ್ವಾಳ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಬಿ.ಎಂ.ಅಬ್ಬಾಸ್ ಅಲಿ ಇವರ ಶಿಫಾರಸಿನ ಮೇರೆಗೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಿಥುನ್ ರೈ ಇವರನ್ನು ನೇಮಕಗೊಳಿಸಿದರು.
ಈ ಸಂದರ್ಭದಲ್ಲಿ ಮಹೇಶ್ ನಾಯಕ್, ರಮ್ಲಾನ್, ಶಾಕೀರ್, ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.
