ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಇವುಗಳ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 24 ರಿಂದ 28ವರೆಗೆ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯುವ 79ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ಕಚೇರಿಯನ್ನು ಮೂಡುಬಿದಿರೆಯಲ್ಲಿರುವ ಆಳ್ವಾಸ್ ಪ್ರಧಾನ ಕಚೇರಿಯಲ್ಲಿ ಉದ್ಘಾಟಿಸಲಾಯಿತು.

ಮಂಗಳೂರು ವಿವಿ ಪ್ರಭಾರ ಉಪಕುಲಪತಿ ಡಾ. ಕಿಶೋರ್ ಕುಮಾರ್ ಸಿ.ಕೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಕಚೇರಿಯನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಉಪಸ್ಥಿತರಿದ್ದರು.
