ಬಂಟ್ವಾಳ: ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಶಾಲಾಭಿವೃದ್ಧಿ ಸಮಿತಿ ಮತ್ತು ಪೋಷಕರ ಸಭೆ ಕಾರ್ಯಕ್ರಮವನ್ನು ಸಮಿತಿ ಕಾರ್ಯಾಧ್ಯಕ್ಷ ಎಂ.ದುರ್ಗಾದಾಸ ಶೆಟ್ಟಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ವಸಂತ ಕುಮಾರ್ ಅಣ್ಣಳಿಕೆ, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ದಯಾನಂದ ಸಪಲ್ಯ, ಉಪಾಧ್ಯಕ್ಷೆ ಪುಷ್ಪಲತಾ, ಸದಸ್ಯೆ ಕುಸುಮಾ, ಯಶೋಧ, ಮುಖ್ಯಶಿಕ್ಷಕ ವೇದಾನಂದ ಕಾರಂತ, ಶಿಕ್ಷಕಿ ನಿವೇದಿತಾ ಮತ್ತಿತರರು ಉಪಸ್ಥಿತರಿದ್ದರು.
