ಸುದ್ದಿ9ಬಂಟ್ವಾಳ:ತಾಲ್ಲೂಕಿನ ಪಿಲಾತಬೆಟ್ಟು ಗ್ರಾಮದ ಮಾಣಿಂಜ ನಿವಾಸಿ, ಹಿರಿಯ ಸಹಕಾರಿ ಧುರೀಣ ಎಂ. ಧರ್ಣಪ್ಪ ಬಂಗೇರ (74) ಇವರು ಅಸೌಖ್ಯದಿಂದ ಸ್ವಗೃಹದಲ್ಲಿ ಸೋಮವಾರ ನಿಧನರಾದರು. ಮೃತರಿಗೆ ಪತ್ನಿ, ಪುತ್ರ ನವಮಂಗಳೂರು ಬಂದರು ಮಂಡಳಿ ಸದಸ್ಯ ಪ್ರವೀಣ್ ಬಂಗೇರ ಮತ್ತು ಇಬ್ಬರು ಪುತ್ರಿಯರು ಇದ್ದಾರೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತರಾಗಿದ್ದ ಇವರು ತುತರ್ು ಪರಿಸ್ಥಿತಿ ವೇಳೆ ‘ಕಹಳೆ’ ಎಂಬ ಪತ್ರಿಕೆ ಮುದ್ರಿಸಿ ವಿತರಿಸಿ ಗಮನ ಸೆಳೆದಿದ್ದರು. ಪುಂಜಾಲಕಟ್ಟೆ ಶ್ರೀ ಶಾರದಾಂಬ ಯುವಕ ಮಂಡಲ ಅಧ್ಯಕ್ಷರಾಗಿ, ಇಲ್ಲಿನ ಸರಕಾರಿ ಪ್ರೌಢ ಶಾಲೆ ಹಳೆ ವಿದ್ಯಾಥರ್ಿ ಸಂಘದ ಸ್ಥಾಪಕಾಧ್ಯಕ್ಷರಾಗಿ ನಿರಂತರ 20 ವರ್ಷಗಳ ಕಾಲ ಸಂಘವನ್ನು ಮುನ್ನಡೆಸಿದ್ದರು. ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಎರಡು ಅವಧಿಗೆ ಅಧ್ಯಕ್ಷರಾಗಿ, ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದರು. ಉತ್ತಮ ನಾಟಕ ಕಲಾವಿದರಾಗಿದ್ದ ಇವರು ಸ್ಥಳೀಯವಾಗಿ ವಿವಿಧ ಧಾಮರ್ಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಕ್ರಿಯಾಶೀಲರಾಗಿ ತೊಡಗಿಸಿಕೊಂಡಿದ್ದರು.
ಅಂತಿಮ ನಮನ: ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕ ಕೆ.ಪ್ರಭಾಕರ ಬಂಗೇರ, ಮೂಡ ಮಾಜಿ ಅಧ್ಯಕ್ಷ ತೇಜೋಮಯ, ಬೆಳ್ತಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಪಿತಾಂಬರ ಹೇರಾಜೆ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಜಿ.ಪಂ.ಮಾಜಿ ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ, ಸದಸ್ಯೆ ತುಳಸಿ ಹಾರಬೆ ಮತ್ತಿತರರು ಮೃತರ ಮನೆಗೆ ಭೇಟಿ ನಿಡಿ ಅಂತಿಮ ನಮನ ಸಲ್ಲಿಸಿದರು.
ಸಂತಾಪ: ಆರ್ಎಸ್ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ, ಬೆಳ್ತಂಗಡಿ ಶಾಸಕ ಕೆ.ವಸಂತ ಬಂಗೇರ, ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಜಿಲ್ಲಾ ಬಿಜೆಪಿ ಘಟಕ ಅಧ್ಯಕ್ಷ ಪ್ರತಾಪಸಿಂಹ ನಾಯಕ್ ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

