ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಇಂಗ್ಲಿಷ್ ಮಾಧ್ಯಮ ಶಾಲೆಗಳ ಅಸೋಸಿಯೇಶನ್ ಬಲ್ಮಠದ ಸಹೋದಯ ಸಭಾಗೃಹದಲ್ಲಿ ನ. 16ರಂದು ಹಮ್ಮಿಕೊಂಡಿದ್ದ ಎರಡು ದಿನಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಕಾರ್ಯಾಗಾರವನ್ನು ಶಿಕ್ಷಣಾಧಿಕಾರಿ ಲೋಕೇಶ್ ದೀಪ ಬೆಳಗಿಸಿ ಉದ್ಘಾಟಿಸಿದರು.
ಪಠ್ಯ ಬದಲಾವಣೆ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ತರಬೇತಿ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಅಸೋಸಿಯೇಶನ್ ಎರಡು ದಿನಗಳ ವಿಶೇಷ ತರಬೇತಿ ಕಮ್ಮಟ ಏರ್ಪಡಿಸಿದೆ. ಅಸೋಸಿಯೇಶನ್ ಅಧ್ಯಕ್ಷ ಮೊಹಮ್ಮದ್ ಬ್ಯಾರಿ ಕಮ್ಮಟದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ರವೀಂದ್ರ ಶೆಟ್ಟಿ ಸ್ವಾಗತಿಸಿದರು. ಸವಣೂರು ಸೀತಾರಾಮ ರೈ ವಂದಿಸಿದರು.
ಈ ಸಂದರ್ಭದಲ್ಲಿ ವಿಕಾಸನ ಟ್ರಸ್ಟಿನ ಡಾ. ಶೈಲಜಾ ಮತ್ತು ಗೀತಾ ಶೆಟ್ಟಿ ಡಿಸ್ಲೆಸಿಕ್ಸ್ ಮತ್ತು ಆಸ್ಟಿಸ್ಟಿಕ್ ಚಿಲ್ಡ್ರನ್ ಬಗ್ಗೆ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ದಕ ಮತ್ತು ಉಡುಪಿ ಜಿಲ್ಲೆಯ ಹಲವಾರು ಶಿಕ್ಷಕರು ಪಾಲ್ಗೊಂಡಿದ್ದರು.




