ಮಂಗಳೂರು: ವಿಶ್ವಹಿಂದೂ ಪರಿಷತ್ ಮಂಗಳೂರಿನಲ್ಲಿ ಹಮ್ಮಿಕೊಂಡಿರುವ ಬೃಹತ್ ಅಯೋಧ್ಯೆ ಜನಾಗ್ರಹ ಸಮಾವೇಶದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾನುವಾರ ಮದ್ಯ ಮಾರಾಟ ನಿಷೇಧಿಸಿ ಎಂದು ದ.ಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

71Unpvb3c5L._SY355_
ಆಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ವಿಎಚ್ ಪಿ ನೇತೃತ್ವದಲ್ಲಿ ಬೃಹತ್ ಸಮಾವೇಶವು ನಗರದ ಕೇಂದ್ರ ಮೈದಾನದಲ್ಲಿ ನಡೆಯಲಿದ್ದು, 50 ಸಾವಿರ ಜನರು ಈ ಸಮಾವೇಶದಲ್ಲಿ ಸೇರುವ ನಿರೀಕ್ಷೆ ಇದೆ. ಅಲ್ಲದೇ ಸಮಾವೇಶಕ್ಕೆ ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಕಾಸರಗೋಡು ಭಾಗದಿಂದಲೂ ಭಾರೀ ಸಂಖ್ಯೆಯ ಜನರು ಆಗಮಿಸಲ್ಲಿದ್ದು,ಯಾವುದೇ ರೀತಿಯ ಅಹಿತಕರ ಘಟನೆ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ನವೆಂಬರ್ 25ರ ಭಾನುವಾರ ಬೆಳಿಗ್ಗೆ 6 ರಿಂದ ರಾತ್ರಿ 12ರವರೆಗೆ ಮದ್ಯದಂಗಡಿ ಬಂದ್ ಮಾಡಿ ಈ ವೇಳೆ ಯಾವುದೇ ಬಾರ್, ವೈನ್ ಶಾಪ್ ಗಳು ವ್ಯಾಪಾರ ನಡೆಸುವಂತಿಲ್ಲ ಎಂದು ಡಿಸಿ ಆದೇಶ ಹೊರಡಿಸಿದ್ದಾರೆ.

By suddi9

Leave a Reply

Your email address will not be published. Required fields are marked *