ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರು ಯಕ್ಷಗಾನ ಮೇಳಗಳ 2018-19 ನೇ ಸಾಲಿನ ಸೇವೆ ಬಯಲಾಟಗಳ ತಿರುಗಾಟದ ಆರಂಭ ರವಿವಾರ ನಡೆಯಿತು. ಪ್ರಥಮ ಸೇವೆಯಾಟದ ಪ್ರಯುಕ್ತ ದೇವಳದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಆರು ಮೇಳದ ಕಲಾವಿದರಿಗೆ ಗೆಜ್ಜೆ ನೀಡುವ ಮೂಲಕ ಮೇಳಗಳ ತಿರುಗಾಟಕ್ಕೆ ಚಾಲನೆ ನೀಡಿದರು.2kateelu yakshagana tirugata 1

ಆರು ಮೇಳಗಳ ದೇವರ ಪೆಟ್ಟಿಗೆ ,ಚಿನ್ನ, ಬೆಳ್ಳಿಯ ಕಿರೀಟ ಹಾಗೂ ಆಯುಧಗಳನ್ನು ದೇವಳದಲ್ಲಿ ಪೂಜೆ ಬಳಿಕ ಶಾಲಾ ಸರಸ್ವತೀ ಸದನದಲ್ಲಿನ ಚೌಕಿಯಲ್ಲಿ ಪೂಜೆ ನಡೆಯಿತು.

IMG-20181202-WA0036

IMG-20181202-WA0038ದೇವಳದ ರಥಬೀದಿಯಲ್ಲಿ ನಿರ್ಮಿಸಿದ ಆರು ರಂಗಸ್ಥಳಗಳಲ್ಲಿ ಬಯಲಾಟ ನಡೆಯಿತು. ಕಟೀಲು ದೇವಳದ ಮೊಕ್ತೇಸರರಾದ ವಾಸುದೇವ ಆಸ್ರಣ್ಣ , ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರು ಗುತ್ತು, ಕಟೀಲು ಆರು ಮೇಳಗಳ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ , ಅಸ್ರಣ್ಣ ಸಹೋದರರು. ಅತ್ತೂರು ಕೊಡೆತ್ತೂರು ಮಾಗಣೆ ಪ್ರಮುಖರು, ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *