ತಿರುವನಂತಪುರ: ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ ಪರಿಹಾರಕ್ಕೆ ಆಗ್ರಹಿಸಿ ಬಿಜೆಪಿ ಎರಡನೇ ಆವೃತ್ತಿಯ ಪ್ರತಿಭಟನೆ ಆರಂಭಿಸಿದೆ. ಕೇರಳ ಸಚಿವಾಲಯದ ಎದುರು ಸೋಮವಾರ ಅನಿರ್ದಿಷ್ಟಾವಧಿಯ ಸರದಿ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿತು. ಬಿಜೆಪಿ ಕೇರಳ ಘಟಕದ ಪ್ರಧಾನ ಕಾರ್ಯದರ್ಶಿ ಎ.ಎನ್.ರಾಧಾಕೃಷ್ಟನ್ ಉಪವಾಸ ಸತ್ಯಾಗ್ರಹ ಆರಂಭಿಸಿದರು. ರಾಜ್ಯದ 14 ಜಿಲ್ಲೆಗಳ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

shabharimale
ವಿವಾದಾತ್ಮಕ  ಹೇಳಿಕೆಯೊಂದಿಗೆ ಎಲ್ಲ ವಯಸ್ಸಿನ ಮಹಿಳೆಯರಿಗೆ ಶಬರಿಮೆಯ ಅಯ್ಯಪ್ಪ ದರ್ಶನಕ್ಕೆ ಅನುಮತಿ ನೀಡಿ ಸೆ.28ರಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಸತ್ಯಾಗ್ರಹಕ್ಕೆ ಸಂಸದೆ ಸರೋಜ ಪಾಂಡೆ ಚಾಲನೆ ನೀಡಿ, ‘ಸಿಪಿಎಂ ನೇತೃತ್ವದ ಎಲ್‍ಡಿಎಫ್ ಸರ್ಕಾರ ಜನರ ಇಚ್ಚೆ ವಿರುದ್ಧ ನಡೆದುಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *