ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಆಶ್ರಯದಲ್ಲಿ ಅಯೋಧ್ಯೆ ಶ್ರೀ ರಾಮ ಜನ್ಮಸ್ಥಾನದ ಮುಕ್ತಿ ಅಂದೋಲನದ ವಿಜಯೋತ್ಸವ ಅಂಗವಾಗಿ ಡಿ.6 ರಂದು ಬಿಸಿರೋಡಿನ ಶ್ರೀ ರಕ್ತೇಶ್ವರೀ ದೇವಿ ದೇವಸ್ಥಾನದ ವಠಾರದ ಲ್ಲಿ ಸತ್ಯನಾರಾಯಣ ಪೂಜೆ ಹಾಗೂ ಮಧ್ಯಾಹ್ನ 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ .
ಈ ಕಾರ್ಯಕ್ರಮ ದಲ್ಲಿ ಕರ್ನಾಟಕ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ , ಗುರುಪುರ ವಜ್ರದೇಹಿ ಮಠದ ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. ವಿಟ್ಲ ತಾಲೂಕು ಹಿಂದೂ ಜಾಗರಣ ವೇದಿಕೆ ಪ್ರಧಾನ ಕಾರ್ಯದರ್ಶಿ ಗಣರಾಜ್ ಭಟ್ ಕೆದಿಲ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಬಂಟ್ವಾಳ ತಾಲೂಕು ಅಧ್ಯಕ್ಷ ಚಂದ್ರ ಕಲಾಯಿ ಪ್ರಕಟನೆಯ ಲ್ಲಿ ತಿಳಿಸಿದ್ದಾರೆ.
