ಮೂಡುಬಿದಿರೆ: ಶ್ರೀ ಮೂಡುಬಿದಿರೆ ದಿಗಂಬರ ಜೈನ ವಿದ್ಯಾವರ್ಧಕ ಸಂಘ ಪ್ರವರ್ತಿತ ಜೈನ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾ ಸಾಧಕ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು.
ಮಹಾರಾಷ್ಟ್ರ ಕನ್ನಡ ಕಲಾವಿದರ ಪರಿಷತ್ ಅಧ್ಯಕ್ಷ ಡಾ.ಸುರೇಂದ್ರ ಕುಮಾರ್ ಹೆಗ್ಡೆ, ವಕೀಲ ಶರತ್ ಡಿ. ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು.

Jain Juniour College Day
ಸಂಸ್ಥೆಯ ಅಧ್ಯಕ್ಷ ಎಂ. ವೀರೇಂದ್ರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯರಾದ ಪೃಥ್ವೀರಾಜ್ ಬಿ., ದಿನೇಶ್ ಕುಮಾರ್ ಎನ್., ಪೋಷಕರ ಪರವಾಗಿ ಮಾರ್ಕ್ ಅರಾನ್ಹ-ಲೀನಾ ದಂಪತಿ ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸಂಚಾಲಕ ಕೆ. ಹೇಮರಾಜ್ ಸ್ವಾಗತಿಸಿದರು. ಪ್ರಾಂಶುಪಾಲ ಮಧುಕರ ಸಾಲಿನ್ಸ್ ವರದಿ ವಾಚಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಪುನೀತ್ ವಂದಿಸಿದರು. ಪ್ರೀಮಲ್ ಜೇನ್ ಅರಾನ್ಹ ಮತ್ತು ದೇವಾಡಿಗ ಸಾಕ್ಷಿ ಉಮೇಶ ನಿರೂಪಿಸಿದರು.

 

By suddi9

Leave a Reply

Your email address will not be published. Required fields are marked *