ಮೂಡುಬಿದಿರೆ: ಕೂಲಿ ಕಾರ್ಮಿಕರೊಬ್ಬರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಒಂಟಿಕಟ್ಟೆಯಲ್ಲಿ ಶುಕ್ರವಾರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಉಮೇಶ್ ಪೂಜಾರಿ(52)ಎಂದು ಗುರುತಿಸಲಾಗಿದೆ. ಇವರ ಪತ್ನಿ ಶುಕ್ರವಾರ ಮನೆಯಲ್ಲಿ ಇಲ್ಲದ ಸಂದರ್ಭ ಗಮನಿಸಿ ಉಮೇಶ್ ಅವರು ಮನೆಯಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ. ಇವರ ಮಗಳು ಶಾಲೆಬಿಟ್ಟು ಮನೆಗೆ ಬಂದಾಗ ತಂದೆಯು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಉಮೇಶ್ ಅವರ ಪತ್ನಿ ಕೆಲವು ಸಮಯಗಳಿಂದ ಅನಾರೋಗ್ಯಪೀಡಿತರಾಗಿದ್ದರೆನ್ನಲಾಗಿದ್ದು ಇನ್ನೊಂದೆಡೆ ಉಮೇಶ್ ಅವರಿಗೆ ಸರಿಯಾಗಿ ಕೆಲಸ ಕೂಡ ಇಲ್ಲದೆ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದರೆನ್ನಲಾಗಿದೆ. ಇದರಿಂದ ಬೇಸತ್ತ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಮೃತರಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಮೂಡುಬಿದಿರೆ ಪೊಲೀಸ್ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
