ಮೂಡುಬಿದಿರೆ : ಇಲ್ಲಿನ ವಿದ್ಯಾಗಿರಿಯ ಆಳ್ವಾಸ್ ಕಾಲೇಜಿನ ವಿದ್ಯಾಗಿರಿಯ ಕೆಫೆಟೇರಿಯಾದಲ್ಲಿ ಕೆಲಸ ಮಾಡಿಕೊಂಡಿದ್ದ ವಿವಾಹಿತ ಮಹಿಳೆಯೋರ್ವರು ನಾಪತ್ತೆಯಾಗಿರುವ ಬಗ್ಗೆ ಇಲ್ಲಿನ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾರ್ಪಾಡಿ ಗ್ರಾಮದ ಗಾಂಧಿನಗರ ದರ್ಖಾಸು ಮನೆಯ ಪದ್ಮನಾಭ ಎಂಬವರ ಪತ್ನಿ ಕುಸುಮಾ(33) ನಾಪತ್ತೆಯಾದ ಮಹಿಳೆ. ಈಕೆ ಡಿ.6 ರಂದು ಬೆಳಿಗ್ಗೆ 8.30ರ ವೇಳೆಗೆ ಮನೆಯಿಂದ ಕೆಲಸಕ್ಕೆ ಹೋದವರು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಅವರ ಪತಿ ಪದ್ಮನಾಭ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

