ಬಂಟ್ವಾಳ: ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಕಛೇರಿ ಇಲ್ಲಿ ತಾಲೂಕು ಪಂಚಾಯತ್ ಚುನಾಯಿತ ಸದಸ್ಯರಿಗೆ ಹಾಗೂ ಸ್ವ-ಸಹಾಯ ಗುಂಪಿನ ಸದಸ್ಯರಿಗೆ   ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದ ಬಗ್ಗೆ ಬುಧವಾರ ಮಾಹಿತಿ ಶಿಬಿರ  ನಡೆಯಿತು. ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ ಕಾರ್ಯಕ್ರಮವನ್ನು   ಉದ್ಘಾಟಿಸಿದರು.   Prevention is better than cure ಎಂಬ ನಾನ್ನುಡಿಯಂತೆ ಆರೋಗ್ಯ ಇಲಾಖೆ ರೋಗಗಳು ಬರುವ ಮುಂಚೆಯೇ ಮುಂಜಾಗ್ರತಾ ಕ್ರಮ ಜರುಗಿಸಬೇಕೆಂದು ಸಂದೇಶ ನೀಡಿದರು.Screenshot_20181219_144958

ತಾಲೂಕು ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಶ್ರೀಮತಿ ಧನಲಕ್ಷ್ಮಿ ಸಿ. ಬಂಗೇರ ಶುಭ ಹಾರೈಸಿದರು. ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ಆದಂ ಕುಂಞ, ನಸೀಮಾ ಬೇಗಂ, ಸವಿತಾ ಹೇಮಂತ್ ಕರ್ಕೇರಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. IMG-20181219-WA0030

ಜಯರಾಮ ಪೂಜಾರಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಇಲಾಖಾ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ|| ದೀಪಾ ಪ್ರಭು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *