ಬಂಟ್ವಾಳ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ದೂರದೃಷ್ಟಿಯ ಚಿಂತನೆಯಾದ 1 ಸಾವಿರ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಆಯ್ಕೆಯಾದ ಎಲ್ಲಾ ಶಾಲೆಗಳನ್ನು ದಡ್ಡಲಕಾಡು ಶಾಲೆಯಂತೆ ಅಭಿವೃದ್ದಿ ಪಡಿಸಲು ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿಗೆ ಉಸ್ತುವಾರಿ ನೀಡುವಂತೆ ಮುಖ್ಯಮಂತ್ರಿ ಕುಮಾರ ಸ್ವಾಮಿಗೆ ಮನವಿ ಸಲ್ಲಿಸಲಾಯಿತು.
ಇತ್ತೀಚೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಡೆದ ಅಧಿವೇಶನದ ಊಟದ ವಿರಾಮದ ವೇಳೆ ಮುಖ್ಯಮಂತ್ರಿಯನ್ನು ಭೇಟಿಯಾಗಿ ಸಮಿತಿಯ ರಾಜಾಧ್ಯಕ್ಷ ಪ್ರಕಾಶ್ ಅಂಚನ್ ಮನವಿ ಸಲ್ಲಿಸಿದರು. ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್ ನಾೈಕ್, ವಿಧಾನ ಪರಿಷತ್ ಸದಸ್ಯ ಭೋಜೆಗೌಡ ಹಾಜರಿದ್ದು ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ದಡ್ಡಲಕಾಡು ಶಾಲೆಯನ್ನು ಅಭಿವೃದ್ದಿ ಪಡಿಸಿರುವ ಬಗ್ಗೆ ಮುಖ್ಯಮಂತ್ರಿಯವರಿಗೆ ಮಾಹಿತಿ ನೀಡಿದ್ದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು.
