ಬಂಟ್ವಾಳ| ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿನ ದ್ವಿತೀಯ ಬಿಎ ವಿದ್ಯಾರ್ಥಿನಿ ಕವಿತಾ ಕೆ. ಇವರು ಚಿತ್ರದುರ್ಗಾ ಜಿಲ್ಲೆಯ ಶ್ರೀ ಮುರುಘಾಮಠದ ಬಸವಕೇಂದ್ರವು ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ರಾಜ್ಯಮಟ್ಟದ ವಚನ ಕಮ್ಮಟ ಅನುಭಾವ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ರ್ಯಾಂಕ್ ಪಡೆದಿರುತ್ತಾರೆ. ಇವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ-ಉಪನ್ಯಾಸಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

