ವಿಟ್ಲ: ದ ಕ ಜಿಲ್ಲಾ ದಲಿತ್ ಸೇವಾ ಸಮಿತಿಯ ವಿದ್ಯಾರ್ಥಿ ಸಂಘಟನೆಯ ವತಿಯಿಂದ ಪ್ರಥಮ ತ್ರೈಮಾಸಿಕ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ ಮತ್ತು ರಸಪ್ರಶ್ನೆ ಕಾರ್ಯಕ್ರಮ ವಿಟ್ಲದ ಮಾದರಿ ಶಾಲಾ ಸಭಾ ಭವನದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಅಂಗನವಾಡಿ ವಿದ್ಯಾರ್ಥಿ ಬಿ ಕೆ ಸ್ವಸ್ತಿಕ್ ಉದ್ಘಾಟಿಸಿದರು.

ಸಂಘಟನೆಯ ಸ್ಥಾಪಕಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಬಿ ಕೆ ಸೇಸಪ್ಪ ಬೆದ್ರಕಾಡು, ಕಾರ್ಯದರ್ಶಿ ಚಂದ್ರಶೇಖರ ಯು ವಿಟ್ಲ, ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷೆ ದಿವ್ಯಶ್ರೀ ಕಲ್ಲಜೇರ, ಸಂಘಟನೆಯ ಇತರ ಪದಾಧಿಕಾರಿಗಳು ಭಾಗವಹಿಸಿದ್ದರು.
