ಮೂಡುಬಿದಿರೆ: ಕನ್ನಡ ಭಾಷೆ ನಮ್ಮ ಮಾತೃ ಭಾಷೆ, ಇಂಗ್ಲೀಷ್ ಭಾಷೆ ವ್ಯವಹಾರಿಕ ಹಾಗೂ ಉದ್ಯೋಗದ ಭಾಷೆ. ಹೆಚ್ಚುತ್ತಿರುವ ಇಂಗ್ಲೀಷ್ ಮಾಧ್ಯಮ ಶಾಲೆಗಳ ಮಧ್ಯೆಯೂ ಕಲ್ಲಬೆಟ್ಟುವಿನಂತಹ ಕೆಲವು ಕನ್ನಡ ಮಾಧ್ಯಮ ಶಾಲೆಗಳು ಉತ್ತಮ ಸಾಧನೆಗಳೊಂದಿಗೆ ತಮ್ಮ ಅಸ್ತತ್ವವನ್ನು ಉಳಿಸಿಕೊಂಡಿರುವುದು ಶ್ಲಾಘನೀಯ ಎಂದು ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ದ.ಕ.ಜಿ.ಪಂ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕಲ್ಲಬೆಟ್ಟು ಇದರ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಶ್ಲಾಘನೀಯ ಎಂದರು.

ವಿಧಾನ ಪರಿಷತ್‍ನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿಶೇಷ ವಿದ್ಯಾರ್ಥಿಗಳಾದ ಪ್ರೀತಮ್ ಮತ್ತು ತುಷಾರ, ಸಾಂಸ್ಕøತಿಕ ಕ್ಷೇತ್ರದಲ್ಲಿ ಜಿಲ್ಲಾ ಮಟ್ಟದಲ್ಲಿ ಸಾಧನೆ ಮಾಡಿರುವ ಅಪರ್ಣಾ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ 9 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, ಶಾಲೆಗೆ ಮೂಲಭೂತ ಸೌಕರ್ಯಗಳನ್ನು ತರುವಲ್ಲಿ ಶ್ರಮಿಸಿರುವ ಮಹಮ್ಮದ್ ಆಲಿದ್, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದಿರುವ ಶಾಲೆಯ ಮುಖ್ಯ ಶಿಕ್ಷಕ ವಿನಯ ಕುಮಾರ್ ಹಾಗೂ ಉತ್ತಮ ಸೇವೆಯನ್ನು ಸಲ್ಲಿಸಿ ವರ್ಗಾವಣೆಗೊಂಡಿರುವ ಶಿಕ್ಷಕಿ ಸಂಧ್ಯಾರಾಣಿ ಅವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪುರಸಭಾ ಸದಸ್ಯೆ ಆಶಾ, ಕಲ್ಲಬೆಟ್ಟು ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಕೃಷ್ಣರಾಜ ಹೆಗ್ಡೆ, ಉದ್ಯಮಿಗಳಾದ ಕೆ.ಶ್ರೀಪತಿ ಭಟ್, ಐ.ರಾಘವೇಂದ್ರ ಪ್ರಭು, ಶ್ರೀಧರ್ ರಾವ್, ಜೊಸ್ಸಿ ಮಿನೇಜಸ್, ದಿನೇಶ್ ಶೆಟ್ಟಿ, ದಾನಿ ಶಾರದಾದೇವಿ, ಪ್ರಾ.ಶಾ.ಶಿ.ಸಂಘದ ಅಧ್ಯಕ್ಷ ನಾಗೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಆಚಾರ್ಯ, ವಿದ್ಯಾರ್ಥಿ ನಾಯಕಿ ಅಫ್ರೀನಾ ಬಾನು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿದರು. ಮುಖ್ಯ ಶಿಕ್ಷಕ ವಿನಯ ಕುಮಾರ್ ವರದಿ ವಾಚಿಸಿದರು. ಸಹ ಶಿಕ್ಷಕಿ ಪ್ರತಿಭಾ ಮತ್ತು ಸುಮನಾ ಪೈ ಸ್ಪರ್ಧಾ ವಿಜೇತರ ಹೆಸರುಗಳನ್ನು ವಾಚಿಸಿದರು.
ಸಹ ಶಿಕ್ಷಕಿ ಉಷಾ ಕಾರ್ಯಕ್ರಮ ನಿರೂಪಿಸಿದರು.
ನಂತರ ಅಂಗನವಾಡಿ ಪುಟಾಣಿಗಳಿಂದ ಮತ್ತು ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು. ಶಿಕ್ಷಕಿ ಅನಿತಾ ಕಾರ್ಯಕ್ರಮ ನಿರೂಪಿಸಿದರು.
