ಮೂಡುಬಿದಿರೆ: ಶಿರ್ತಾಡಿಯ ಹೋಲಿ ಏಂಜೆಲ್ಸ್ ಹಾಗೂ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟ ಶಾಲಾ ವಠಾರದಲ್ಲಿ ನಡೆಯಿತು.

ಶಾಲೆಯ ಹಳೆ ವಿದ್ಯಾರ್ಥಿನಿ, ಅಂತಾರಾಷ್ಟ್ರೀಯ ಕ್ರೀಡಾಪಟು ಜೊಯ್ಲಿನ್ ಲೋಬೋ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಆನೆಗುಡ್ಡೆ ಸಂತ ಫ್ರಾನ್ಸಿಸ್ ದೇವಾಲಯದ ಧರ್ಮಗುರುಗಳಾದ ರೆ.ಫಾ ಜೆರಾಲ್ಡ್ ಪಿಂಟೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
