ಮೂಡುಬಿದಿರೆ: ಇಲ್ಲಿನ ಕಲ್ಲಬೆಟ್ಟು ಎಕ್ಸಲೆಂಟ್ ಪ.ಪೂ.ಕಾಲೇಜಿನಲ್ಲಿ ವಿದ್ವಾನ್ ಕೃಷ್ಣರಾಜ ಕುತ್ಪಾಡಿಯವರಿಂದ ‘ವಿವೇಚನೀ’ ಸರಣಿ ಉಪನ್ಯಾಸ ಕಾರ್ಯಕ್ರಮದ ಅಂಗವಾಗಿ ಸಂಸ್ಕಾರ ಮತ್ತು ಮೌಲ್ಯಗಳ ಕುರಿತು ವಿಶೇಷ ಉಪನ್ಯಾಸ ಜರುಗಿತು.

Vivechani pgm news
ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಸಾಧಿಸಲು ನಿಷ್ಠೆ ಮತ್ತು ತ್ಯಾಗದಿಂದ ವಿದ್ಯಾರ್ಜನೆ ಗೈಯಬೇಕು. ಭಾರತವು ಅತ್ಯಂತ ಶ್ರೇಷ್ಠ ದಾರ್ಶನಿಕರ ಋಷಿ ಮುನಿಗಳ ಪರಂಪರೆಯಿಂದ ಬೆಳೆದು ನಿಂತಿದೆ. ಇಡೀ ಜಗತ್ತಿಗೆ ಬೆಳಕನ್ನು ನೀಡಿದ ದೇಶವೆಂಬ ಹೆಮ್ಮೆ ನಮ್ಮದಾಗಿರಬೇಕು. ಶ್ರೇಷ್ಠ ಸಂಸ್ಕಾರವೇ ಶಿಕ್ಷಣದ ಅರ್ಥವಾಗಿದೆ ಎಂದು ತಿಳಿಸಿದರು.
ಲೆಕ್ಕಪರಿಶೋಧಕರಾದ ಬಾಲಕೃಷ್ಣ ಭಟ್ ಪುತ್ತಿಗೆ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ರಶ್ಮಿತಾ ಜೈನ್ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ರಾಮಕೃಷ್ಣ ಹೆಗಡೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

By suddi9

Leave a Reply

Your email address will not be published. Required fields are marked *