ಬಂಟ್ವಾಳ :ತಾಲೂಕು ಮಟ್ಟದ ಸಕ್ರಿಯ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಕಾರ್ಯಕ್ರಮವನ್ನು ಶ್ರೀಯುತ ಚಂದ್ರಹಾಸ ಕರ್ಕೇರಾ, ಅಧ್ಯಕ್ಷರು ತಾಲೂಕು ಪಂಚಾಯತ್ ಬಂಟ್ವಾಳ ಇವರು ತಾಲೂಕು ಆಸ್ಪತ್ರೆ ಬಂಟ್ವಾಳದಲ್ಲಿ  ಗುರುವಾರ  ಉದ್ಘಾಟಿಸಿದರು. ಆರೋಗ್ಯ ಇಲಾಖೆಯ ಕಾರ್ಯಕರ್ತೆಯರು ಮುತುವರ್ಜಿಯಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕ್ಷಯರೋಗವನ್ನು ಪತ್ತೆ ಹಚ್ಚಿ ದೇಶವನ್ನು ಕ್ಷಯರೋಗದಿಂದ ಮುಕ್ತಗೊಳಿಸಬೇಕೆಂದು ಸಂದೇಶವನ್ನು ನೀಡಿದರು.IMG-20190103-WA0104

 

ಮುಖ್ಯ ಅತಿಥಿಗಳಾದ ಶ್ರೀಯುತ ಬಿ. ಎಂ. ಅಬ್ಬಾಸ್ ಆಲಿ, ಉಪಾಧ್ಯಕ್ಷರು ತಾಲೂಕು ಪಂಚಾಯತ್ ಬಂಟ್ವಾಳ ಇವರು ಕ್ಷಯರೋಗವನ್ನು ಮೊದಲ ಹಂತದಲ್ಲಿಯೇ ಗುರುತಿಸಿ ಚಿಕಿತ್ಸೆಗೆ ಒಳಪಡಿಸಬೇಕೆಂಬ ಮಾತನ್ನು ಆಶಾ ಕಾರ್ಯಕರ್ತೆಯರಿಗೆ ತಿಳಿಸಿದರು. ತಾಲೂಕು ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾದ  ಧನಲಕ್ಷ್ಮಿ ಸಿ. ಬಂಗೇರಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.IMG-20190103-WA0034

ಡಾ. ಸದಾಶಿವ ಶಾನುಭಾಗ್ ಆಡಳಿತ ವೈದ್ಯಾಧಿಕಾರಿಯವರು ಹಾಗೂ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಎಲ್ಲರನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *