ಬೆಳಗಾವಿ : ರಾಜ್ಯದಲ್ಲಿ ಪ್ರಮೋದ್ ಮುತಾಲಿಕ್ ನೇತೃತ್ವದ ಶ್ರೀರಾಮಸೇನೆಯನ್ನು ನಿಷೇಧಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳೆಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾದಲ್ಲಿ ಶ್ರೀ ರಾಮಸೇನೆಗೆ ನಿಷೇಧ ಹೇರಲಾಗಿದೆ ಅದೇ ರೀತಿ ರಾಜ್ಯದಲ್ಲಿ ಅದರ ನಿಷೇಧಕ್ಕೆ ಚಿಂತನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಶ್ರೀ ರಾಮಸೇನೆ ಹಲವು ಬಾರಿ ಧರ್ಮದ ಹೆಸರಿನಲ್ಲಿ ಕಾನೂನನ್ನು ಕೈಗೆತ್ತಿಕೊಂಡಿದ್ದು, ಇದಕ್ಕೆ ಕಡಿವಾಣ ಹಾಕಲು ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.
ಮುಖ್ಯಮಂತ್ರಿ ಸಿದ್ದು ಹೇಳಿಕೆಗೆ ಪ್ರಮೋದ್ ಮುತಾಲಿಕ್ ಗರಂ ಆಗಿದ್ದಾರೆ.

