ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನವು ನವೀಕರಣಗೊಳ್ಳುತ್ತಿದ್ದು, ಮಾ.4ರಿಂದ ಮಾ.13ರ ತನಕ ಬ್ರಹ್ಮಕಲಶೋತ್ಸವ ನಡೆಯಲಿದೆ. ಗಾಣಿಗ ಸಮಾಜದ ವತಿಯಿಂದ ಪೊಳಲಿ ದೇವಸ್ಥಾನಕ್ಕೆ ಸೇವಾ ರೂಪವಾಗಿ ನೀಡಿದ ಕಂಚು ದೀಪವನ್ನು ನವೀಕರಣಗೊಳಿಸಲಾಗುತ್ತಿದ್ದು,

IMG-20190223-WA0045ಇದರ ಆಧಾರ ಶಿಲೆ ಮತ್ತು ಶಿಲಾಪೀಠವನ್ನು ಫೆ.24ರ ಆದಿತ್ಯವಾರ ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಗುರುಪುರ ಕೈಕಂಬದ ಪೊಳಲಿ ದ್ವಾರದಿಂದ ಪಾದಯಾತ್ರೆಯಲ್ಲಿ ಭವ್ಯ ಮೆರವಣಿಗೆಯ ಮೂಲಕ ಶ್ರೀಕ್ಷೇತ್ರಕ್ಕೆ ತಲುಪಿಸುವ ಕೆಲಸ ನಡೆಯಲಿದೆ. ಸಮಸ್ತ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀದೇವಿಯ ಕೃಪೆಗೆ ಪಾತ್ರವಾಗುವಂತೆ ಅಧ್ಯಕ್ಷರು ಮತ್ತು ಸರ್ವಸದಸ್ಯರು ಶ್ರೀ ಪೊಳಲಿ ದೀಪಸ್ತಂಭ ನವೀಕರಣ ಸಮಿತಿಯ ಪ್ರಕಟನೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *