ಮಾಣಿ : ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಶುಕ್ರವಾರ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು.
ಅಧ್ಯಕ್ಷತೆ ವಹಿಸಿದ್ದ ಶಾಲಾ ಸಂಚಾಲಕರಾದ ಪ್ರಹ್ಲಾದ್.ಜೆ.ಶೆಟ್ಟಿ ವಿದ್ಯಾರ್ಥಿಗಳ ಬೌದ್ಧಿಕ, ಮಾನಸಿಕ ವಿಕಸನದಲ್ಲಿ ಶಾಲೆ ಪ್ರಮುಖ ಪಾತ್ರ ವಹಿಸುತ್ತದೆ. ಅವಿರತ ಪ್ರಯತ್ನ, ವ್ಯವಸ್ಥಿತ ಕಾರ್ಯವೈಖರಿಯಿಂದ ಯಶಸ್ಸು ಶತಸಿದ್ಧ ಎಂದರು.
ಆಡಳಿತಾಧಿಕಾರಿ ಸಿ.ಶ್ರೀಧರ್ ಮಾತನಾಡಿ, ಶಾಲಾ ಭೌತಿಕ ಪರಿಸರದಿಂದ ಪಡೆದ ಮೌಲ್ಯಗಳು, ಜ್ಞಾನಾತ್ಮಕ ಅಂಶಗಳು ಭವಿಷ್ಯದ ನಿರ್ಮಾಣಕ್ಕೆ ಪೂರಕವಾಗಿ ಸಹಕರಿಸುತ್ತದೆ. ವಿದ್ಯಾಭ್ಯಾಸವೆಂಬುದು ಕೇವಲ ಅರ್ಹತಾಪತ್ರಕ್ಕೆ ಸೀಮಿತವಾಗಬಾರದು. ಅದು ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿಗೆ ಊರುಗೋಲಾಗಬೇಕು ಎಂದರು.

ಆಡಳಿತ ಮಂಡಳಿಯ ಅಧ್ಯಕ್ಷ ಡಾ| ಬಿ.ಎಸ್. ನಾೈಕ್, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ.ವಿ.ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಗ್ರೇಸ್ ಪಿ.ಸಲ್ದಾನಾ, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಣಮ್ಯಾ ಸ್ವಾಗತಿಸಿ, ಸೌಜನ್ಯ ವಂದಿಸಿದರು. ಸಂಜನಾ ರೈ ಕಾರ್ಯಕ್ರಮ ನಿರೂಪಿಸಿದರು.
