ಬಂಟ್ವಾಳ : ಪಾಣೆಮಂಗಳೂರು ಸಮೀಪದ ಸುಣ್ಣದ ಗೂಡು ಬಳಿ ನೇತ್ರಾವತಿ ನದಿಯಲ್ಲಿ ಬುಧವಾರ ಬೆಳಿಗ್ಗೆ ಸುಮಾರು 65-70 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ದೊರೆತಿದೆ.
ನದಿಯಲ್ಲಿ ಮೃತದೇಹ ತೇಲುತ್ತಿರುವುದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಆಕಸ್ಮಾತ್ ನದಿಗೆ ಕಾಲು ಜಾರಿ ಬಿದ್ದಿದ್ದಾರೋ ಅಥವಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಎಂಬುದು ಪೊಲೀಸರಿಗೆ ಗೊತ್ತಾಗಬೇಕಷ್ಟೆ. ಈ ಬಗ್ಗೆ ಸ್ಥಳೀಯ ಪುರಸಭಾ ಸದಸ್ಯ ಮುಹಮ್ಮದ್ ಇದ್ರೀಸ್ ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


