ಬಂಟ್ವಾಳ : ವ್ಯಾಪ್ತಿಯಲ್ಲಿ ಕಾನೂನು ಸಾಕ್ಷರತಾ ರಥ ಸಂಚರಿಸಲ್ಲಿದ್ದು ಈ ಸಮಯದಲ್ಲಿ ತಾಲೂಕಿನಾದ್ಯಂತ ಕಾನೂನು ಶಿಬಿರಗಳನ್ನು ಹಮ್ಮಿಕೊಳ್ಳಲಾಗಿರುತ್ತದೆ. ಇಂದು, ಮಾ.28 ಅಪರಾಹ್ನ 3.45ಕ್ಕೆ ಕಾನೂನು ಶಿಬಿರವನ್ನು ಮಾನ್ಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಬಂಟ್ವಾಳ ಇವರ ಉಪಸ್ಥಿತಿಯಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದು ಎಲ್ಲಾ ಇಲಾಖಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಈ ಕಾರ್ಯಕ್ರಮದಲ್ಲಿ ತಪ್ಪದೇ ಭಾಗವಹಿಸಲು ಸೂಚಿಸಿದೆ.
