ಚಾಮರಾಜನಗರ : ಲೋಕಸಭಾ ಮಹಾ ಸಮರ ಆರಂಭವಾಗಿದೆ. ರಾಜ್ಯದಲ್ಲಿ 14 ಕ್ಷೇತ್ರಗಳಲ್ಲಿ ಚುನಾವಣೆ ಬಿರುಸಿನಿಂದ ನಡೆಯುತ್ತಿದೆ. ಚಾಮರಾಜನಗರದಲ್ಲಿ ಚುನಾವಣಾ ಕಾರ್ಯಕ್ಕೆ ಆಗಮಿಸಿದ್ದ ಅಧಿಕಾರಿಯೋರ್ವರು ಮತಗಟ್ಟೆಯಲ್ಲಿಯೇ ಮೃತಪಟ್ಟಿದ್ದಾರೆ. ಷರೀಫ್ ಸರ್ಕಲ್ ಮತಗಟ್ಟೆಯಲ್ಲಿ ಹನೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಶಾಂತಮೂರ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಚಾಮರಾಜನಗರದ ಷರೀಫ್ ಸರ್ಕಲ್ ಮತಗಟ್ಟೆ ಸಂಖ್ಯೆ 48ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಕರ್ತವ್ಯ ನಿರ್ವಹಣೆ ವೇಳೆ ಹೃದಯಾಘಾತವಾಗಿ ಮೃತಪಟ್ಟಿದ್ದು, ಸ್ಥಳಕ್ಕೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಭೇಟಿ ನೀಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಚುಣಾವಣಾ ಅಧಿಕಾರಿ ಸಾವು

By Suddi9

Leave a Reply

Your email address will not be published. Required fields are marked *