ಮೂಡುಬಿದಿರೆ: ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ ಮಂಗಳೂರು ಗ್ರಾಮಾಂತರ, ಸಾರ್ವಜನಿಕ ಶಿಕ್ಷಣ ಇಲಾಖೆ ಮೂಡುಬಿದಿರೆ ಇವರ ವತಿಯಿಂದ ನಡೆದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಬಿ.ಇ.ಒ. ಕಛೇರಿಯ ಬಿ.ಆರ್.ಸಿ. ಸಭಾಂಗಣದಲ್ಲಿ ನಡೆಯಿತು.

BEO office
ಕ್ಷೇತ್ರ ಶಿಕ್ಷಣಾಧಿಕಾರಿ ಆಶಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, 12 ದಿನಗಳ ಬೇಸಿಗೆ ಶಿಬಿರದಲ್ಲಿ ವಿವಿಧ ಕೌಶಲ್ಯಗಳನ್ನು ಪಡೆದುಕೊಂಡು ಮಕ್ಕಳು ಪ್ರಗತಿ ಹೊಂದಿದ್ದಾರೆ. ಅವರ ಭವಿಷ್ಯವು ಉಜ್ವಲವಾಗಲಿ ಎಂದು ಶುಭ ಹಾರೈಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕಿ ಸಲ್ಮಾ ಮುಖ್ಯ ಅತಿಥಿಯಾಗಿ ಮಾತನಾಡಿ, ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣವನ್ನು ಪಡೆದು ಮೊಬೈಲುಗಳ ಬಳಕೆ ಕಡಿಮೆ ಮಾಡಿ ಉತ್ತಮ ಜೀವನವನ್ನು ನಡೆಸಬೇಕು ಎಂದರು.
ಮೂಡುಬಿದಿರೆ ತಹಸೀಲ್ದಾರ್ ಸುದರ್ಶನ್, ರೋಟರಿ ವಿದ್ಯಾ ಸಂಸ್ಥೆಗಳ ಪ್ರಾಂಶುಪಾಲ ವಿನ್ಸೆಂಟ್ ಡಿಕೋಸ್ತ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ಯಾಮಲಾ ಸಿ.ಕೆ. ಮುಖ್ಯ ಅತಿಥಿಯಾಗಳಾಗಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಸವಿತಾ, ಪೂರ್ಣಿಮಾ, ಮಹೇಶ್, ದಿವ್ಯಾ ಉಪಸ್ಥಿತರಿದ್ದರು.
ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಷಾ ಡಿ., ಮೇಲ್ವೀಚಾರಕಿ ಮಾಲಿನಿ, ಭಾರತಿ, ರತಿಶೆಟ್ಟಿ, ಕಾತ್ಯಾಯನಿ, ಶುಭಾ, ಉಮೇಶ್ ಕುಲಾಲ್ ಉಪಸ್ಥಿತರಿದ್ದರು.
ಶಿಬಿರಾರ್ಥಿ ಲಾವಣ್ಯಾ ಸ್ವಾಗತಿಸಿದರು. ಶಿಬಿರಾರ್ಥಿ ಸೃಜನ್ ಕಾರ್ಯಕ್ರಮ ನಿರೂಪಿಸಿದರು. ಮೇಲ್ವೀಚಾರಕಿ ಶುಭಾ ವಂದಿಸಿದರು.
ಶಿಬಿರಾರ್ಥಿಗಳು ಕಂಸಾಳೆ, ಭರತನಾಟ್ಯ ಸಹಿತ ವಿವಿಧ ನೃತ್ಯ ಪ್ರದರ್ಶಿಸಿದರು. ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

By suddi9

Leave a Reply

Your email address will not be published. Required fields are marked *