ಬಂಟ್ವಾಳ: ದೇಶದಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿರುವುದು ಮತ್ತು ದ.ಕ.ಜುಲ್ಲೆಯಲ್ಲೂ ಬಿಜೆಪಿಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಅಭೂತಪೂರ್ವಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಜಿಪಂಸದಸ್ಯ ತುಂಗಪ್ಪ ಬಂಗೇರ ನೇತೃತ್ವದಲ್ಲಿ ಪುಂಜಾಲಕಟ್ಟೆಯಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆಗೈದರು.ಈ ಸಂದರ್ಭ ಸದಾನಂದಗೌಡ ನಾವೂರು ಮೊದಲಾದವರಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ತುಂಗಪ್ಪ ಬಂಗೇರ ಅವರು,ಪ್ರಧಾನಿ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುತ್ತಿರುವುದು ಸಂತಸ ತಂದಿದೆ.ಇವರ ನೇತೃತ್ವದಲ್ಲಿ ಭಾರತ ವಿಶ್ವಗುರುವಾಗಿ ಮೂಡಿಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

IMG-20190523-WA0097

By suddi9

Leave a Reply

Your email address will not be published. Required fields are marked *