ದೆಹಲಿಯ ಗುರುಗ್ರಾಮ್ ನಲ್ಲಿ ಐಸ್ ಸ್ಕೇಟಿಂಗ್ ಅಸೋಸಿಯೇಷನ್‌ ಆಫ್‌ ಇಂಡಿಯಾ ಆಯೋಜಿಸಿದ *ಸ್ಪೀಡ್ ಸ್ಕೇಟಿಂಗ್ ಓಪನ್ ಚಾಲೆಂಜ್ 2019* ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿದ ಮಂಗಳೂರಿನ ಅನಘಾ ಚಿನ್ನದ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.8 ರಿಂದ 10 ವರ್ಷದೊಳಗಿನ ಬಾಲಕಿಯರ ವಿಭಾಗದ 500 ಮೀಟರ್ ಐಸ್ ರಿಂಕ್ ರೇಸ್ ನಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.

IMG-20190527-WA0025ಮಂಗಳೂರಿನ‌ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾದ ಅನಘಾ ಬಿಜೈ ಲೂರ್ಡ್ಸ್ ಸಿಬಿಎಸ್ಇ ಶಾಲೆಯ 4ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾರೆ.ಐಸ್ ಸ್ಕೇಟಿಂಗ್ ರಾಷ್ಟ್ರೀಯ ತರಬೇತುದಾರ ಅವಧೂತ್ ಥಾವಡೆ ಅವರಿಂದ ಐಸ್ ಸ್ಕೇಟಿಂಗ್ ತರಬೇತಿ ಪಡೆಯುತ್ತಿದ್ದು,ಮಂಗಳೂರಿನ ಹೈ ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಸದಸ್ಯರಾಗಿರುವ ಅನಘಾ ತರಬೇತುದಾರರಾದ ಮೋಹನ್ ದಾಸ್.ಕೆ ಹಾಗೂ ಜಯರಾಜ್ ಅವರಿಂದ ಸ್ಕೇಟಿಂಗ್ ತರಬೇತಿಯನ್ನು  ಪಡೆಯುತ್ತಿದ್ದಾರೆ.

By suddi9

Leave a Reply

Your email address will not be published. Required fields are marked *