ಬಂಟ್ವಾಳ:   ಸರಕು ಸಾಗಾಟ ವಾಹನಗಳಲ್ಲಿ ಕೂಲಿ ಕಾರ್ಮಿಕರನ್ನು ಅಥವಾ ಇತರ ಪ್ರಯಾಣಿಕರನ್ನು ಸಾಗಿಸದಂತೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಸರಕು ಸಾಗಾಟದ ವಾಹನ ಚಾಲಕರಿಗೆ ಎಚ್ಚರಿಕೆ ನೀಡಿದ್ದಾರೆ.
ಈ ರೀತಿ ಸರಕುಸಾಗಾಟದ ವಾಹನದಲ್ಲಿ ಪ್ರಯಾಣಿಕರನ್ನು ಸಾಗಿಸುವುದು ಅಪಾಯದ ಸನ್ನಿವೇಶಕ್ಕೆ ಕಾರಣವಾಗಬಾರದು,ಕಟ್ಟಡ ನಿರ್ಮಾಣ ಗುತ್ತಿಗೆದಾರರು ತಮ್ಮ ಕಾರ್ಮಿಕರನ್ನು  ಲಾರಿ ಅಥವಾ ಟಿಪ್ಪರ್‌ಗಳಲ್ಲಿ ಸಾಗಾಟ ಮಾಡಬಾರದು.
IMG-20190528-WA0054 ಲಾರಿಯ ಕ್ಯಾಬಿನ್‌ನಲ್ಲಿ ಕುಳಿತುಕೊಂಡು ಪ್ರಯಾಣಿಸಲು ಅನುಮತಿ ಇರುವ ಸಂಖ್ಯೆಯ ಪ್ರಯಾಣಿಕರನ್ನು ಸಾಗಿಸಬೇಕು,ಸರಕು ಸಾಗಾಟ ವಾಹನಗಳಲ್ಲಿ ಕಾರ್ಮಿಕರನ್ನು ಅಥವಾ ಜನರನ್ನು ಸಾಗಾಟ ಮಾಡುವುದು ಪರವಾನಿಗೆ ನಿಯಮಕ್ಕೆ ವಿರುದ್ಧವಾಗಿದೆ ಎಂದು ಸರಕು ಸಾಗಟ ವಾಹನ ಕೇಂದ್ರದಲ್ಲಿ ಚಾಲಕರಿಗೆ ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದರು. ಕಾರ್ಮಿಕರನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಸಾಗಾಟ ಮಾಡಲು ಇತರ ವಾಹನಗಳನ್ನು ಬಳಕೆ ಮಾಡಬೇಕು. ಸರಕು ಸಾಗಾಟ ವಾಹನಗಳಲ್ಲಿ ಜನರನ್ನು ಸಾಗಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು  ಎಚ್ಚರಿಸಿದ್ದಾರೆ.
IMG-20190528-WA0050

By suddi9

Leave a Reply

Your email address will not be published. Required fields are marked *