ಬಂಟ್ವಾಳ: ಬಂಟ್ವಾಳ ತಾಲೂಕು ಕೊೈಲ ಸ.ಹಿ.ಪ್ರಾ. ಶಾಲೆ ಹಾಗೂ ಶಾಲೆಯನ್ನು ದತ್ತು ಸ್ವೀಕರಿಸಿದ ಜನ ಸೇವಾ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮ ಬುಧವಾರ ಜರಗಿತು.
ಟ್ರಸ್ಟ್ ನಿಂದ ಆರಂಭಿಸಲಾದ ಪೂರ್ವ ಪ್ರಾಥಮಿಕ ಶಾಲೆ ಮತ್ತು ಒಂದನೇ ತರಗತಿಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಶಾಲಾ ಆವರಣದೊಳಗೆ ಬ್ಯಾಂಡ್ ವಾದ್ಯದೊಂದಿಗೆ ಆರತಿ ಬೆಳಗಿ ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು.ಬಳಿಕ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಿದರು.

ಟ್ರಸ್ಟ್ ಅಧ್ಯಕ್ಷ ಪದ್ಮರಾಜ ಬಲ್ಲಾಳ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ, ಟ್ರಸ್ಟ್ ಸಂಚಾಲಕ ಜಗದೀಶ ಕೊೈಲ ಅವರು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿದರು.
ಗ್ರಾ.ಪಂ. ಸದಸ್ಯರಾದ ಶೋಭಾ , ಸುನಂದಾ, ಕುಸುಮಾ, ಟ್ರಸ್ಟ್ ಕಾರ್ಯದರ್ಶಿ ಚಂದಪ್ಪ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಾಲಾ ಶಿಕ್ಷಕ ವೃಂದ, ಪೆÇೀಷಕರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಮೇಬುಲ್ ಫೆರ್ನಾಂಡಿಸ್ ಅವರು ಸ್ವಾಗತಿಸಿ, ವಂದಿಸಿದರು.

