ಬಂಟ್ವಾಳ : ಪಾಣೆಮಂಗಳೂರು ಸಮೀಪದ ಬಂಗ್ಲೆಗುಡ್ಡೆಯಲ್ಲಿ  ಕುಸಿಯುವ ಭೀತಿಯಲ್ಲಿರುವ ದೇವರಾಜು ಅರಸು ಬಾಲಕರ ಹಾಸ್ಟೆಲ್ ಕಟ್ಟಡಕ್ಕೆ ಶುಕ್ರವಾರ ಸಂಜೆ ಮಾಜಿ ಸಚಿವ ಬಿ ರಮಾನಾಥ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದರು.IMG-20190614-WA0079

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿದ್ದು, ಬಂಗ್ಲೆಗುಡ್ಡೆಯ ಪುರಸಭಾ ಕಟ್ಟಡದಲ್ಲಿ ಬಾಡಿಗೆ ನೆಲೆಯಲ್ಲಿ ಕಾರ್ಯಾಚರಿಸುತ್ತಿರುವ ಈ ಬಾಲಕರ ಹಾಸ್ಟೆಲ್ ಕಟ್ಟಡ  ಶಿಥಿಲಾವಸ್ಥೆಗೆ ತಲುಪಿದ್ದು, ಕುಸಿಯುವ ಭೀತಿ ಎದುರಿಸುತ್ತಿದೆ.  ಈ  ಕಟ್ಟಡದಲ್ಲಿ ವಿದ್ಯಾರ್ಥಿಗಳ ವಾಸ ಅಪಾಯಕಾರಿ ಎಂದರಿತು ಗುರುವಾರವಷ್ಟೆ ಇಲ್ಲಿನ ವಿದ್ಯಾರ್ಥಿಗಳನ್ನು ಮೊಗರ್ನಾಡುವಿನ ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಿಸಲಾಗಿತ್ತು.
ಸ್ಥಳದಿಂದಲೇ ಹಿಂದುಳಿದ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸ ಕಟ್ಟಡ ನಿರ್ಮಿಸಲು ಸರಕಾರಕ್ಕೆ ತುರ್ತಾಗಿ ಪ್ರಸ್ತಾಪನೆ ಸಲ್ಲಿಸುವ ಮೂಲಕ ಸ್ಪಂದಿಸುವಂತೆ ಸಲಹೆ ನೀಡಿದರು.
ಈ ಸಂದರ್ಭ ಸ್ಥಳೀಯ ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಸಜಿಪಮುನ್ನೂರು ಗ್ರಾ ಪಂ ಸದಸ್ಯ ಯೂಸುಫ್ ,   ಮುಹಮ್ಮದ್ ಶರೀಫ್ ಬೋಗೋಡಿ, ಡೆಂಝಿಲ್ ನೊರೊನ್ಹಾ, ಆರಿಫ್ ನಂದಾವರ ಮೊದಲಾದವರಿದ್ದರು.

By Suddi9

Leave a Reply

Your email address will not be published. Required fields are marked *