ಮೂಡುಬಿದಿರೆ: ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ವಿಶ್ವ ಯೋಗ ದಿನವನ್ನು ಶಾಲಾ ಅಮೃತ ಮಹೋತ್ಸವ ಕಟ್ಟಡದ ಸಭಾಭವನದಲ್ಲಿ ಆಚರಿಸಲಾಯಿತು.

ಮುಖ್ಯ ಶಿಕ್ಷಕ ಶಶಿಕಾಂತ ವೈ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಉದ್ಘಾಟಿಸಿದರು. ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯ ಉತ್ತಮವಾಗಿ ಜೀವನದಲ್ಲಿ ನೆಮ್ಮದಿ ಪ್ರಾಪ್ತಿಯಾಗುತ್ತದೆ. ಮಕ್ಕಳಿಗೆ ಜ್ಞಾಪಕಶಕ್ತಿ ಹೆಚ್ಚುತ್ತದೆ. ನಾವು ದೈಹಿಕವಾಗಿ ಮತ್ತು ಮಾನಸಿಕವಾಗಿ ಬಲಿಷ್ಠರಾಗಬಹುದು. ಯೋಗ ಆಚರಣೆಗೆ ಸೀಮಿತವಾಗಿರದೆ ನಿರಂತರವಾಗಿ ನಮ್ಮ ಮನೆಗಳಲ್ಲಿ ಅಭ್ಯಾಸಮಾಡುವಂತಾಗಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಯೋಗ ಶಿಕ್ಷಕಿ ಮಂಜುಳಾ ಯೋಗದ ಮಹತ್ವದ ಬಗ್ಗೆ ತಿಳಿಸಿದರು. ಶಿಕ್ಷಣ ಸಂಪನ್ಮೂಲ ಅಧಿಕಾರಿ ರಾಬರ್ಟ್ ಡಿ’ಸೋಜ ಉಪಸ್ಥಿತರಿದ್ದರು.
ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿದರು. ಕಿಶೋರ್ ಕುಮಾರ್ ವಂದಿಸಿದರು. ನಾಗವರ್ಮ ಜೈನ್ ಕಾರ್ಯಕ್ರ ನಿರೂಪಿಸಿದರು.

