ವಿಟ್ಲ :ಶತಮಾನೋತ್ತರ ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಬಂಟ್ವಾಳ ತಾಲೂಕಿನ ಬೊರಿಮಾರ್ ಚರ್ಚ್ ಗೆ ಶಿವಮೊಗ್ಗದ ಬಿಷಪ್ ಅತೀ ವಂದನೀಯ ಡಾ. ಫ್ರಾನ್ಸಿಸ್ ಸೆರಾವೋ ಭಾನುವಾರ ಭೇಟಿ ನೀಡಲಿದ್ದಾರೆ.
IMG-20190622-WA0130ಕಳೆದ 125 ವರ್ಷಗಳಲ್ಲಿ ಬೊರಿಮಾರ್ ಚರ್ಚ್ ವ್ಯಾಪ್ತಿಗೆ ಒಳಪಟ್ಟು ವಿದೇಶದಲ್ಲಿ ಉದ್ಯೋಗ ನಿಮಿತ್ತ ನೆಲೆಸಿರುವವರ ಹೆಸರಿನಲ್ಲಿ ಶತಮಾನೋತ್ತರ ಬೆಳ್ಳಿಹಬ್ಬದ ಅಂಗವಾಗಿ ಬೊರಿಮಾರ್ ಚರ್ಚ್ ನಲ್ಲಿ ನಡೆಯುವ ವಿಶೇಷ ಬಲಿಪೂಜೆಯಲ್ಲಿ ಅವರು ಪ್ರಧಾನ ಗುರುಗಳಾಗಿ ಪೂಜೆಯನ್ನು ನೆರವೇರಿಸಲಿದ್ದಾರೆ.  ಮಂಗಳೂರು ಬಿಜೈ ಲೂಡ್ಸ್ ಸೆಂಟ್ರಲ್ ಸ್ಕೂಲ್ ನ ಪ್ರಾಂಶುಪಾಲರಾದ ರೆ.ಫಾ.ರೊಬರ್ಟ್‌ ಡಿಸೋಜ ಅತಿಥಿಯಾಗಿ ಭಾಗವಹಿಸಲಿದ್ದಾರೆ
 ಎಂದು ಚರ್ಚ್ ನ ಪ್ರಧಾನ ಧರ್ಮಗುರುಗಳಾದ ವಂದನೀಯ
ಫಾ. ಗ್ರೆಗರಿ ಪಿರೇರಾ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ರೋಷನ್ ಬೊನಿಫಾಸ್ ಮಾರ್ಟಿಸ್ ರವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *