ಬಂಟ್ವಾಳ: ತಂದೆಯೇ ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪುಂಜಾಲಕಟ್ಟೆ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಂತ್ರಸ್ತ ಬಾಲಕಿಯು ತಂದೆ-ತಾಯಿ, ತಮ್ಮ ಹಾಗೂ ತಂಗಿಯೊಂದಿಗೆ ಪಿಲಾತಬೆಟ್ಟು ಮನೆಯಲ್ಲಿ ವಾಸವಾಗಿದ್ದು, ಫೆ.೮ರಂದು ರಾತ್ರಿ ಮನೆಯಲ್ಲಿ ಎಲ್ಲರೂ ಮಲಗಿರುವ ಸಂದರ್ಭ ತನ್ನ ತಂದೆ ಬಲಾತ್ಕಾರವಾಗಿ ಅತ್ಯಾಚಾರ ಎಸಗಿದ್ದಾನೆ. ಅದಲ್ಲದೆ ಬಳಿಕವೂ ಹಲವು ಅತ್ಯಾಚಾರ ಎಸಗಿರುವುದಾಗಿ, ಇದರಿಂದ ತಾನು ಗರ್ಭಿಣಿಯಾಗಿರುವುದಾಗ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾಳೆ.
ಈ ಸಂಬಂಧ ಫೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪುಂಜಾಲಕಟ್ಟೆ ಪೊಲೀಸರು ಆರೋಪಿಯನ್ನು ಬುಧವಾರ ರಾತ್ರಿ ವೇಳೆ  ವಶಕ್ಕೆ ಪಡೆದಿದ್ದಾರೆ. ತನಿಖೆ ಮುಂದುವರಿದಿದೆ.

By suddi9

Leave a Reply

Your email address will not be published. Required fields are marked *