ಬಂಟ್ವಾಳ :ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ಸದಸ್ಯತ್ವ ಅಭಿಯಾನದ ಕಾರ್ಯಗಾರ ಬಿ.ಸಿ.ರೋಡಿನ ಗೀತಾಂಜಲಿ ಸಭಾಂಗಣದಲ್ಲಿ ಈ ದಿನ ನಡೆಯಿತು.ಜಿಲ್ಲಾ ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ್ ಕಾರ್ಯಾಗಾರ ಉದ್ಘಾಟಿಸಿದರು.

ಕ್ಷೇತ್ರ ಅಧ್ಯಕ್ಷ ದೇವದಾಸ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ , ಸದಸ್ಯತ್ವ ಅಭಿಯಾನದ ಜಿಲ್ಲಾ ಸಹ ಸಂಚಾಲಕ ಸುದರ್ಶನ್ ಮೂಡಬಿದರೆ ಮಾಹಿತಿ ನೀಡಿ ದರು.ಈ ಬಾರಿ ಅತೀ ಹೆಚ್ಚಿನ ಸದಸ್ಯರನ್ನು ನೋಂದಾಯಿಸುವ ಮೂಲಕ ಪಕ್ಷ ಬಲ ಪಡಿಸುವಂತೆ ಕರೆ ನೀಡಿದರು.

ರಾಜ್ಯ ಸಹ ವಕ್ತಾರೆ ಸುಲೋಚನ.ಜಿ.ಕೆ ಭಟ್, ಕ್ಷೇತ್ರ ಪ.ಕಾರ್ಯದರ್ಶಿ ರಾಮದಾಸ್ ಬಂಟ್ವಾಳ , ಮೋನಪ್ಪ ದೇವಸ್ಯ, ಸದಸ್ಯತ್ವ ಅಭಿಯಾನದ ಕ್ಷೇತ್ರ ಸಂಚಾಲಕ ದೇವಪ್ಪ ಪೂಜಾರಿ, ಸಹ ಸಂಚಾಲಕ ಅಭಿಷೇಕ್ ರೈ , ಜಿಲ್ಲಾ ಯುವ ಮೋರ್ಚ ಪ್ರ.ಕಾರ್ಯದರ್ಶಿ ಸಂದೇಶ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು .