ವಿಟ್ಲ: ಪ್ರತಿ ವರ್ಷ ವನಮಹೋತ್ಸವದಂದು ಎಲ್ಲಾ ವಿದ್ಯಾರ್ಥಿಗಳೂ ಒಂದೊಂದು ಗಿಡ ನೆಟ್ಟು ತಾವು ಬೆಳೆಯುವುದರ ಜೊತೆ ಜೊತೆಗೆ ಅವನ್ನೂ ಬೆಳೆಸಬೇಕು ಎಂದು ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ತಾರಾನಾಥ್ ಆಳ್ವ ಹೇಳಿದರು. ಅವರು ಪಡಿಬಾಗಿಲು ಸರಕಾರಿ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲಾ ಆವರಣದಲ್ಲಿ ಅತಿಥಿಗಳು ಗಿಡ ನೆಟ್ಟರು ಹಾಗೂ ಆಸಕ್ತ ವಿದ್ಯಾರ್ಥಿಗಳಿಗೆ ಗಿಡಗಳನ್ನು ವಿತರಿಸಲಾಯಿತು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಕಾರಂತ, ವಿದ್ಯಾಸಿರಿ ಶಿಕ್ಷಣ ಕೇಂದ್ರದ ಅಧ್ಯಕ್ಷರಾದ ಶ್ರೀ ಪ್ರಭಾಕರ ಶೆಟ್ಟಿ ದಂಬೆಕಾನ, ಕಾರ್ಯದರ್ಶಿ ಜಿನಚಂದ್ರ ಜೈನ್, ಕೋಶಾಧಿಕಾರಿ ಐತ್ತಪ್ಪ ನಾಯ್ಕ್, ಪಿ.ಕೆ.ದಾಮೋದರ, ಸಮಿತಿ ಸದಸ್ಯರು, ಮಕ್ಕಳ ಪೋಷಕರು, ಶಿಕ್ಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಶಶಿಕಲಾ ಸ್ವಾಗತಿಸಿದರು. ಅಧ್ಯಾಪಕ ಮುತ್ತುರಾಜ್ ವಂದಿಸಿದರು.
