ಬಂಟ್ವಾಳ:   ಬಿಜೆಪಿಯ ಸದಸ್ಯತ್ವ ಅಭಿಯಾನವು ಪಕ್ಷ ಸಂಘಟನೆಯ ಭಾಗವಾಗಿದ್ದು,  ನಮ್ಮ ಕ್ಷೇತ್ರಕ್ಕೆ ನೀಡಲಾದ ಸದಸ್ಯತ್ವದ ಗುರಿಯನ್ನು ತಲುಪುವ ನಿಟ್ಟಿನಲ್ಲಿ ಬೂತ್ ಮಟ್ಟದ ಕಾರ್ಯಕರ್ತರು ಈ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಉಳಿಪಾಡಿ ಅವರು ಕರೆ ನೀಡಿದ್ದಾರೆ. ಬಿ.ಸಿ.ರೋಡಿನ ಗೀತಾಂಜಲಿ ಸಭಾಂಗಣದಲ್ಲಿ ಶನಿವಾರ ನಡೆದ.  ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿ.ಜೆ.ಪಿ ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತಾನಾಡಿದ ಅವರು  ಇಡೀ ದೇಶದಲ್ಲಿಯೇ ಪಕ್ಷದ ಸದಸ್ಯತ್ವ   ಅಭಿಯಾನ ನಡೆಯತ್ತಿದೆ.ಈ ನಿಟ್ಟಿನಲ್ಲಿ  ಕಾರ್ಯಕರ್ತರು ಸದಸ್ಯತಾ ಅಭಿಯಾನವನ್ನು  ಯಶಸ್ವಿಗೊಳಿಸಬೇಕೆಂದರು.
IMG-20190803-WA0035
ಸಭೆಯ ಅದ್ಯಕ್ಷತೆಯನ್ನು ಕ್ಷೇತ್ರ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ ವಹಿಸಿ ಸದಸ್ಯತಾ ಅಭಿಯಾನದ ಮಾಹಿತಿ ನೀಡಿದರು. ವೇದಿಕೆಯಲ್ಲಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಕ್ಯಾ.ಬ್ರಿಜೇಶ್ ಚೌಟ, ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ,ಮಾಜಿ ಶಾಸಕರಾದ ಕೆ.ಪದ್ಮನಾಭ ಕೊಟ್ಟಾರಿ,ಕ್ಷೇತ್ರದ ಪ್ರಧಾನಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ,ಮೋನಪ್ಪ ದೇವಸ್ಯ ಉಪಸ್ಥಿತರಿದ್ದರು. ಇದಕ್ಕು ಮೊದಲು  ಇತ್ತೀಚೆಗೆ ನಿಧನರಾದ ಹಿರಿಯ ಸಾಹಿತಿ, ವಿ.ಹಿಂ.ಪ.  ಮಾಜಿ ಅಧ್ಯಕ್ಷರಾದ ಏರ್ಯ ಲಕ್ಷ್ಮೀನಾರಾಯಣ ಆಳ್ವರಿಗೆ ಪಕ್ಷದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸದಸ್ಯತ್ವ ಅಭಿಯಾನದ ಕ್ಷೇತ್ರ ಸಂಚಾಲಕರಾದ ದೇವಪ್ಪ ಪೂಜಾರಿ ಪ್ರಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು.

By suddi9

Leave a Reply

Your email address will not be published. Required fields are marked *