ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಬಾಲಭವನ ಸಮಿತಿ ಬಂಟ್ವಾಳ ಇವರ ಸಂಯುಕ್ತ ಆಶ್ರಯ ದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದೇಶಭಕ್ತಿ ಗೀತೆ ಸ್ಪರ್ಧೆ ಕಾರ್ಯಕ್ರಮ ಬಿಸಿರೋಡಿನ ಸ್ತ್ರೀ ಶಕ್ತಿ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಹಕ್ಕುಗಳ ಜೊತೆ ಕರ್ತವ್ಯಗಳ ಪಾಲನೆಯಾಗಬೇಕು. ಈ ದೇಶವನ್ನು ಕಟ್ಟಿ ಬೆಳೆಸುವ ಉಳಿಸುವ ಶಕ್ತಿ ಇರುವುದು ಯುವಜನತೆಗೆ, ಅ ನಿಟ್ಟಿನಲ್ಲಿ ಪ್ರತಿಯೊಬ್ಬರಿಗೆ ಶಿಕ್ಷಣ ಸಿಗಬೇಕು ಎಂದರು.ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ.ಬಂಗೇರ ಕಾರ್ಯಕ್ರಮ ಕ್ಕೆ ಶುಭ ಹಾರೈಸಿದರು.ವೇದಿಕೆಯಲ್ಲಿ ತಾ.ಪಂ.ಇಒ ರಾಜಣ್ಣ, ವಿಟ್ಲ ಸಿಡಿಪಿ ಸುಧಾಜೋಶಿ, ಬಂಟ್ವಾಳ ಸಿ.ಡಿ.ಪಿ.ಒ ಗಾಯತ್ರಿ ಕಂಬಳಿ,ತೀರ್ಪುಗಾರರಾದ ವೆಂಕಟಕೃಷ್ಣ ಮತ್ತು ವಸಂತಕುಮಾರ್, ಹಿರಿಯ ಮೇಲ್ವಿಚಾರಕಿ ಭಾರತಿ ಕುಂದರ್, ಪುಷ್ಪಲತಾ, ಮೇಲ್ವಿಚಾರಕಿಯರಾದ ನೀತಾಕುಮಾರಿ , ಸುಜಾತ, ಶಾಲಿನಿ ಮತ್ತಿತರರು ಉಪಸ್ಥಿತರಿದ್ದರು.ಹಿರಿಯ ಮೇಲ್ವಿಚಾರಕಿ ಉಷಾಕುಮಾರಿ ಸ್ವಾಗತಿಸಿ, ಮೇಲ್ವಿಚಾರಕಿ ಸವಿತಾ ವಂದಿಸಿದರು.
ಮೇಲ್ವಿಚಾರಕಿ ಸಿಂದೂ ಕಾರ್ಯಕ್ರಮ ನಿರೂಪಿಸಿದರು.

