ಉಡುಪಿ: ತೈಲ ಟ್ಯಾಂಕರ್ನ ಇಂಧನ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದ ಇಬ್ಬರು ಕಾಮರ್ಿಕರು ಆಮ್ಲಜನಕ ಪೂರೈಕೆಯಾಗದೆ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ಕೋಟ ಸಮೀಪ ಬುಧವಾರ ತಡರಾತ್ರಿ ನಡೆದಿದೆ.


ಮೃತರ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಕಾಮರ್ಿಕರು ತೈಲ ಟ್ಯಾಂಕರ್ ಒಳಗಿಳಿದು ಸ್ವಚ್ಛಗೊಳಿಸುತ್ತಿದ್ದಾಗ ಉಸಿರುಗಟ್ಟಿ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

