ಶ್ರೀನಿವಾಸಪುರ: ನಾಗರಿಕರು ಮಳೆ ನೀರು ಕೊಯಿಲಿಗೆ ಆದ್ಯತೆ ನೀಡಬೇಕು. ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಹೇಳಿದರು. ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಲ ಸಕ್ತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಲ ಮೂಲಗಳ ಪುನಶ್ಚೇತನಕ್ಕೆ ಹೆಚ್ಚಿನ ಗಮನ ನೀಡಬೇಕು. ನೀರಿನ ಮೂಲಗಳು ನಿರ್ಲಕ್ಷ್ಯಕ್ಕೆ ಒಳಗಾಗಿ ಬಳಕೆಗೆ ಯೋಗ್ಯವಾಗಿಲ್ಲ ಎಂದು ಹೇಳಿದರು.ನೀರನ್ನು ಪೋಲು ಮಾಡದೆ ಮಿತವಾಗಿ ಬಳಸಬೇಕು. ಪರಿಸರ ಮಾಲೀನ್ಯ ಉಂಟಾಗದಂತೆ ಎಚ್ಚರ ವಹಿಸಬೇಕು. ಯಾವುದೇ ಕಾರಣಕ್ಕೂ ನೀರಿನ ಸಮಸ್ಯೆ ತಲೆದೋರಲು ಎಡೆಗೊಡಬಾರದು ಎಂದು ಹೇಳಿದರು.

ಪರಿಸರ ಅಧಿಕಾರಿ ಶೇಖರ್ ರೆಡ್ಡಿ ಮಾತನಾಡಿ, ಮಳೆ ನೀರು ಅತ್ಯಂತ ಶುದ್ಧವಾದ ನೀರು. ಅದನ್ನು ವೈಜ್ಞಾನಿಕ ರೀತಿಯಲ್ಲಿ ಸಂಗ್ರಹಿಸಿ ಕುಡಿಯಲು ಬಳಸಬಹುದಾಗಿದೆ. . ಇದಕ್ಕೆ ಪೂರಕವಾಗಿ ಪ್ರತಿಯೊಬ್ಬರೂ ಮಳೆ ನೀರು ಸಂಗ್ರಹ ಮಾಡಿಕೊಳ್ಳಬೇಕು ಎಂದು ಹೇಳಿದರು.ಸಿ.ಎಒ ರಾಜೇಶ್ವರಮ್ಮ. ಎಸ್.ಚೆಂದು, ಬೈರೆಡ್ಡಿ ಇದ್ದರು.
