ಉಡುಪಿ : ಶ್ರೀಕೃಷ್ಣ ಮಠದ ರಥಬೀದಿ ಪರಿಸರದಲ್ಲಿ ಅಸ್ವಸ್ಥಗೊಂಡು ಬಿದ್ದಿರುವ ಅಪರಿಚಿತ ಸುಮಾರು 55 ವರ್ಷದ ಮಹಿಳೆಯನ್ನು ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು, ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ ಘಟನೆ ಭಾನುವಾರ ನಡೆದಿದೆ.
ಮಹಿಳೆಯು ಯಾತ್ರಾರ್ಥಿ ಎಂದು ಶಂಕಿಸಲಾಗಿದೆ. ಮಹಿಳೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಕಾರಣ ವಿಳಾಸ ತಿಳಿದು ಬಂದಿಲ್ಲ. ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕೃತಕ ಉಸಿರಾಟದ ವ್ಯವಸ್ಥೆಯಲ್ಲಿ ಇಡಲಾಗಿದೆ. ವಾರಸುದಾರರು ತುರ್ತಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಸಮಾಜಸೇವಕರ ಪ್ರಕಟಣೆ ತಿಳಿಸಿದೆ.
