ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸೋಮವಾರ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಜರಗಲಿದ್ದು ಬೆಳಿಗ್ಗೆ 8.30 ಗಂಟೆಗೆ 108 ಕಾಯಿ ಗಣಹೋಮ, ತೆನೆ ಮಹೂರ್ತ, ಅಭಿಷೇಕ ಹಾಗೂ 1008 ಕಾಯಿ ಪಲ್ಲ ಪೂಜೆ ಜರಗಲಿದೆ.
ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ಹಾಗೂ ಮಧ್ಯಾಹ್ನ12.45 ಕ್ಕೆ ದಸರಾ ಮಹೋತ್ಸವದಲ್ಲಿ ಪ್ರತಿಷ್ಠಾಪನೆ ಗೊಳ್ಳಲಿರುವ ಶಾರದಾ ಪ್ರತಿಮೆಯ ಮಹೂರ್ತ ಜರಗಲಿರುವುದು. ರಾತ್ರಿ 8 ಗಂಟೆಗೆ ಮಹಾಪೂಜೆ ನಂರ ರಂಗ ಪೂಜೆ ನೆರವೇರಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿ ಶ್ರೀ ಮಹಾಗಣಪತಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
