ಶ್ರೀನಿವಾಸಪುರ: ಮತದಾರರ ಪಟ್ಟಿ ಪರಿಶೀಲನೆಗೆ ನೇಮಿಸಲಾಗಿರುವ ಅಧಿಕಾರಿಗಳು, ನಿಯಮಾನುಸಾರ ಪರಿಶೀಲನೆ ನಡೆಸಬೇಕು ಎಂದು ತಹಶೀಲ್ದಾರ್ ಬಿ.ಎಸ್.ರಾಜೀವ್ ಹೇಳಿದರು.ಪಟ್ಟಣದ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಮತದಾರರ ಪಟ್ಟಿ ಪರಿಶೀಲನಾ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಮತದಾರರ ಪಟ್ಟಿಯಿಂದ ಮರಣ ಹೊಂದಿರುವ, ಗ್ರಾಮ ತೊರೆದಿರುವ ವ್ಯಕ್ತಿಗಳ ಹೆಸರನ್ನು ಬಿಡಬೇಕು. ಪಟ್ಟಿಯಲ್ಲಿ ಯಾವುದೇ ದೋಷ ಕಂಡುಬಂದರೂ ಮತದಾರರ ಮನವಿಯನ್ನು ಪುರಸ್ಕರಿಸಿ ತಿದ್ದುಪಡಿ ಮಾಡಬೇಕು ಎಂದು ಹೇಳಿದರು.6svp1ep

ಅಧಿಕಾರಿಗಳು ತರಬೇತಿ ಅವಧಿಯಲ್ಲಿ ಗಮವಿಟ್ಟು ಕೀಳಿಸಿಕೊಳ್ಳಬೇಕು. ಯಾವುದೇ ಅನುಮಾನ ಬಂದಲ್ಲಿ ಕೇಳಿ ಬಗೆಹರಿಸಿಕೊಳ್ಳಬೇಕು. ಯಾವುದೇ ಹಂತದಲ್ಲಿ ಸಮಸ್ಯೆ ಕಂಡುಬಂದಲ್ಲಿ ಹಿರಿಯ ಅಧಿಕಾರಿಗಳು ಹಾಗೂ ತರಬೇತುದಾರ ನೆರವು ಪಡೆಯಬೇಕು ಎಂದು ಸಲಹೆ ಮಾಡಿದರು.ಜಿಲ್ಲಾ ಸಂಪನ್ಮೂಲ ವ್ಯಕ್ತಿ ಮಂಜುನಾಥ ನಾಯಕ್ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಮತದಾರರ ಪಟ್ಟಿ ಪರಿಶೀಲನೆ ಮಾಡುವುದರ ಬಗ್ಗೆ ತರಬೇತಿ ನೀಡಿದರು.
ಚುನಾವಣಾಧಿಕಾರಿ ಸುರೇಶ್, ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ ಇದ್ದರು

By suddi9

Leave a Reply

Your email address will not be published. Required fields are marked *